ತೇಜಸ್ವಿ ಸೂರ್ಯಗೆ ಒಲಿದ ‘ಅತ್ಯುತ್ತಮ ಸಂಸದ’ ಪ್ರಶಸ್ತಿ
ಬೆಂಗಳೂರು: ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಚೊಚ್ಚಲ ಬಾರಿಗೆ ಆಯ್ಕೆಯಾಗಿ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ – 2022 (4ನೆ ಆವೃತ್ತಿ)ಯಲ್ಲಿ ಅತ್ಯುತ್ತಮ ಸಂಸದ (Best Debutant Parliamentarian) ಪ್ರಶಸ್ತಿಗೆ ಭಾಜನರಾಗಿದ್ದು, ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪಡೆದಿದ್ದು ಗಮನಾರ್ಹ ಎಂದು ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ. 17ನೇ ಲೋಕಸಭಾ ಅವಧಿಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಸಂಸದರಾಗಿ ಆಯ್ಕೆಯಾಗಿರುವ ತೇಜಸ್ವೀ ಸೂರ್ಯ ಅವರು ಪ್ರಾದೇಶಿಕ ಮತ್ತು ರಾಷ್ಟ್ರೀಯ …