ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಣ್ಣೂರಿನ ತಲಶೇರಿಯಲ್ಲಿ ಮತ್ತೋರ್ವನ ಬಂಧನ ?

ಸುಳ್ಯ : ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿ ಕರ್ನಾಟಕ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪರಲ್ ನಿವಾಸಿ ಅಬೀದ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

(ಜು.30) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ!

ಸುಳ್ಯ ಜುಲೈ30: ಇಂದು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾವು, ಅಜ್ಜಾವರ, ಡಿಪೋ, ಕೇರ್ಪಳ, ಜಬಳೆ, ಕೇನ್ಯ, ಮಂಡೆಕೋಲು, ಶ್ರೀರಾಂಪೇಟೆ, ಸಂಪಾಜೆ, ಅರಂತೋಡು ಹಾಗೂ ಕೋಲ್ಚಾರು ಪೀಡರ್ ಗಳಲ್ಲಿ ದುರಸ್ತಿ ಕಾರ್ಯ ಹಾಗೂ ಟ್ರೀಕಟ್ಟಿಂಗ್ ಕಾರ್ಯ ನಡೆಯುತ್ತಿರುವುದರಿಂದ ಜು.30ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪೂರ್ಣ ಸ್ಥಬ್ದವಾದ ಸುಳ್ಯ; ನೆನಪಿಗೆ ಬಂದ ಲಾಕ್ ಡೌನ್ ದಿನಗಳು.!

ಸುಳ್ಯ : ಆಗಸ್ಟ್ 1ರವರೆಗೆ ದ.ಕ. ಜಿಲ್ಲೆಯಲ್ಲಿ ಅಗತ್ಯ ಸೇವೆಯನ್ನು ಹೊರತುಪಡಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಇದರ ಪರಿಣಾಮ ಸುಳ್ಯ ನಗರ ಪ್ರದೇಶಗಳಲ್ಲಿ ಅಗತ್ಯ ಸೇವೆಗಳು,ಆಸ್ಪತ್ರೆ ಹಾಗೂ ಮೆಡಿಕಲ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ಬಂದ್ ಆಗಿದ್ದು ಸುಳ್ಯ ಸಂಪೂರ್ಣ ನಿಶಬ್ದವಾಗಿ ಬಿಕೋ ಎನ್ನುತ್ತಿತ್ತು.

ಬೆಳ್ಳಾರೆ ಲಾಠಿಚಾರ್ಜ್ : ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ಪಿ.ರಮೇಶ ರವರ ಮನೆಗೆ ಸಚಿವ ಎಸ್.ಅಂಗಾರ ಭೇಟಿ.!

ಬೆಳ್ಳಾರೆ: ಜುಲೈ27 ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ನಡೆದ ಪೋಲೀಸ್ ಲಾಠಿಚಾರ್ಜ್ ವೇಳೆ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ‘ಹುಬ್ಬಳ್ಳಿ ರಮೇಶ್’ ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ದ.ಕ. ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, …

ಬೆಳ್ಳಾರೆ ಲಾಠಿಚಾರ್ಜ್ : ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ ಪಿ.ರಮೇಶ ರವರ ಮನೆಗೆ ಸಚಿವ ಎಸ್.ಅಂಗಾರ ಭೇಟಿ.! Read More »

ಸುರತ್ಕಲ್ ಮರ್ಡರ್; ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ: ಶಾಲಾ, ಕಾಲೇಜಿಗೆ ರಜೆ.!

ಸುರತ್ಕಲ್: ನಿನ್ನೆ ಸುರತ್ಕಲ್ ನಲ್ಲಿ ನಡೆದ ಗುಂಪು ಹತ್ಯೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಸುರತ್ಕಲ್, ಬಜಪೆ, ಮೂಲ್ಕಿ, ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಹಾಗೂ ಆ ಪ್ರದೇಶಗಳಲ್ಲಿ ಜು.29ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ, ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ಕಳೆದ ರಾತ್ರಿ ಸುರತ್ಕಲ್ ನಲ್ಲಿ ಅಮಾಯಕ ಫಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳ ತಂಡ ಹತ್ಯೆಗೈದಿತ್ತು.

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ