ತೇಜಸ್ವಿ ಸೂರ್ಯಗೆ ಒಲಿದ ‘ಅತ್ಯುತ್ತಮ ಸಂಸದ’ ಪ್ರಶಸ್ತಿ

ಬೆಂಗಳೂರು: ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಚೊಚ್ಚಲ ಬಾರಿಗೆ ಆಯ್ಕೆಯಾಗಿ ಉತ್ತಮ ಸೇವೆ ಸಲ್ಲಿಸಿರುವ ಸಂಸದರಿಗೆ ನೀಡಲಾಗುವ ಲೋಕಮತ್ ಸಂಸದೀಯ ಪ್ರಶಸ್ತಿ – 2022 (4ನೆ ಆವೃತ್ತಿ)ಯಲ್ಲಿ ಅತ್ಯುತ್ತಮ ಸಂಸದ (Best Debutant Parliamentarian) ಪ್ರಶಸ್ತಿಗೆ ಭಾಜನರಾಗಿದ್ದು, ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪಡೆದಿದ್ದು ಗಮನಾರ್ಹ ಎಂದು ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ. 17ನೇ ಲೋಕಸಭಾ ಅವಧಿಯ ಎರಡನೇ ಅತೀ ಕಿರಿಯ ಸಂಸದರಾಗಿ 28ರ ವಯಸ್ಸಿನಲ್ಲಿ ಸಂಸದರಾಗಿ ಆಯ್ಕೆಯಾಗಿರುವ ತೇಜಸ್ವೀ ಸೂರ್ಯ ಅವರು ಪ್ರಾದೇಶಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಅನೇಕ ವಿಷಯಗಳನ್ನು ಸಂಸತ್ತಿನಲ್ಲಿ ಹಾಗೂ ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿ ದತ್ತಾಂಶ ಸುರಕ್ಷತೆ ಬಗ್ಗೆ, ವೈಯುಕ್ತಿಕ ದತ್ತಾಂಶ ಸುರಕ್ಷತೆ ಮಸೂದೆಯ ಜಂಟಿ ಸ್ಥಾಯಿ ಸಮಿತಿ ಸದಸ್ಯರಾಗಿ ನೀತಿ ನಿಯಮಾವಳಿಗಳ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ ಎಂದು ತಿಳಿಸಿದೆ. 2019ರ ಜೂನ್ 17 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಷ್ಟ್ರೀಯ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಸಂಸತ್ತಿನ 26 ಚರ್ಚೆಗಳಲ್ಲಿ ಧ್ವನಿ ಎತ್ತಿದ್ದು, ಎಲ್ಲ ಅಧಿವೇಶನಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡು ಸಂಸತ್ತಿನಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ. 17ನೇ ಲೋಕಸಭೆಯಲ್ಲಿ ಎಲ್ಲ ವಲಯಗಳ ಮೇಲಿನ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹಿತಾಸಕ್ತಿಯ 308 ಪ್ರಶ್ನೆಗಳನ್ನು ಸಂಸತ್ತಿನಲ್ಲಿ ಕೇಳಿದ್ದು ( ಕೃಷಿ, ಶಿಕ್ಷಣ,ವಿಮಾನಯಾನ, ರೇಲ್ವೆ, ಐಟಿ, ಬಿಟಿ, ಅಂತರಿಕ್ಷ ಕ್ಷೇತ್ರಗಳಿಗೆ ಸಂಬಂಧಿಸಿದಂತೆ) ಈ ಕುರಿತು ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದು ಸಂಸದರ ಕಚೇರಿ ತಿಳಿಸಿದೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ