ಬಿಜೆಪಿ ಹಿರಿಯ ನಾಯಕ, ಕೆ.ಎಸ್ ಈಶ್ವರಪ್ಪನವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಪಕ್ಷದ ಹಲವಾರು ಹುದ್ದೆಗಳನ್ನು ಬಿಜೆಪಿಯಲ್ಲಿ ಅಲಂಕರಿಸಿದ್ದರು. ಬಿಜೆಪಿಯ ಹಿರಿಯ ನಾಯಕ ಎಂದೇ ಗುರುತಿಸಿಕೊಂಡಿದ್ದ ಈಶ್ವರಪ್ಪ ರಾಜ್ಯ ರಾಜಕೀಯದಲ್ಲಿ ತನ್ನದೇ ಆದ ವರ್ಚಸ್ಸನ್ನೇ ಗಿಟ್ಟಿಸಿಕೊಂಡಿದ್ದರು. ಆದರೆ ಇದೀಗ ದಿಢೀರ್ ಆಗಿ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಜೆ.ಪಿ ನಡ್ಡಾಗೆ ಪತ್ರ ಬರೆದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ‘ರಾಜಕೀಯ ನಿವೃತ್ತಿ’ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ನಾನು ಸ್ವ-ಇಚ್ಚೆಯಿಂದ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ, ಹಾಗೂ ನಾನು ಇನ್ನು ಮುಂದೆ ಯಾವುದೇ ರೀತಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಪತ್ರ ಬರೆದಿದ್ದಾರೆ. ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ ಮಾಡಿದ್ದು, ಹಲವು ಅಚ್ಚರಿಗೆ ಕಾರಣವಾಗಿದೆ.