ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪರ ಮತ್ತೆ ಸ್ಪರ್ಧೆ ಮಾಡಲು ಅವಕಾಶ ವಂಚಿತರಾದ ಸಚಿವ ಅಂಗಾರರು ಮಾಧ್ಯಮಗಳಿಗೆ ಹೇಳಿಕೆ ನೀಡಿ ನಾನು ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿ, ಚುನಾವಣಾ ಪ್ರಚಾರ ಕಾರ್ಯದ ಹಿಂದೆ ಇನ್ನೂ ಇಲ್ಲ ಎಂದಿದ್ದರು. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಅಂಗಾರರು ತನ್ನ ಹೇಳಿಕೆಯನ್ನು ಹಿಂಪಡೆದಿದ್ದು, ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ ಎಂದರು. ನಾನು ಮೊದಲಿನಂತೆ ಸಕ್ರೀಯವಾಗಿದ್ದು ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ ಎಂದಿದ್ದಾರೆ. ಪತ್ರಿಕಗೋಷ್ಠಿಯ ಸಂಧರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಚಾರ ಸಮಿತಿ ಮುಖ್ಯಸ್ಥ ವೆಂಕಟ್ ದಂಬೆಕೋಡಿ ಉಪಸ್ಥಿತರಿದ್ದರು.
The post ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಹಿಂಪಡೆದ ಸಚಿವ ಅಂಗಾರ; ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ಗುರಿ appeared first on ನಮ್ಮ ಸುಳ್ಯ.