ನಮ್ಮ ಸುಳ್ಯ

ಏಪ್ರಿಲ್ 25ರಂದು ನಾಳೆ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ – ನಮ್ಮ ಸುಳ್ಯ


ಏಪ್ರಿಲ್ 25ರಂದು ನಾಳೆ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ
ಸುಳ್ಯ: ಎಐಸಿಸಿ ಅಧ್ಯಕ್ಷರಾದ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಏಪ್ರಿಲ್ 25ಕ್ಕೆ ಸುಳ್ಯಕ್ಕೆ ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಜೀ. ಕೃಷ್ಣಪ್ಪರವರ ಪರವಾಗಿ ಪ್ರಚಾರ ಸಭೆ ನಡೆಸಲು ಆಗಮಿಸುತ್ತಿದ್ದು, ಏಪ್ರಿಲ್ 25ರಂದು ಬೆಳಗ್ಗೆ 11:30ಕ್ಕೆ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನ ವಠಾರದಲ್ಲಿ ನಡೆಯುವ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಖರ್ಗೆರವರು ಭಾಷಣ ಮಾಡಲಿದ್ದಾರೆ. ಅಲ್ಲದೆ ರಾಷ್ಟ್ರ ,ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಸುಳ್ಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿ ಎಐಸಿಸಿ ಅಧ್ಯಕ್ಷರೊಬ್ಬರು ಸುಳ್ಯಕ್ಕೆ ಆಗಮಿಸುತ್ತಿದ್ದು, 25 ರಂದು ಬೆಳಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ನಲ್ಲಿ ಮಲ್ನಾಡು ಶಾಲಾ ಮೈದಾನದಲ್ಲಿ ಬಂದಿಳಿದು ಬಳಿಕ ಕಾರ್ಯಕ್ರಮಕ್ಕೆ ಆಗಮಿಸಲಿದ್ದು ಅದ್ದೂರಿಯ ಸಿದ್ಧತೆಗಳು ನಡೆಯುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಗಮನದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ, ಹಾಗೂ ಸುಳ್ಯ, ಪುತ್ತೂರು, ಬೆಳ್ತಂಗಡಿ ಸಹಿತ ಜಿಲ್ಲೆಯ ಎಲ್ಲಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಮತ್ತಷ್ಟು ಹುರುಪು ಬರಲಿದೆ, ಬರದಿಂದ ಸಿದ್ಧತೆಗಳು ನಡೆಯಿತ್ತಿದೆ ಇದು ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ದಿನವಾಗಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಸುಳ್ಯ ವಿಧಾನಸಭಾ ಕ್ಷೇತ್ರ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಜಯಪ್ರಕಾಶ್ ರೈ, ಕೆಪಿಸಿಸಿ ವಕ್ತಾರರಾದ ಟಿ ಎಂ ಶಾಹಿದ್ ತೆಕ್ಕಿಲ್ ಜಂಟಿ ಹೇಳಿಕೆಯಲ್ಲಿ ಮಾಧ್ಯಮಕ್ಕೆ ತಿಳಿಸಿದರು.



Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ