ಹನುಮನ ಭಕ್ತರು ಭಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್‌ ದೇಶ ಬಿಟ್ಟು ಓಡಬೇಕಾಗುತ್ತದೆ ಎಂದ ಸಿಎಂ ಬೊಮ್ಮಾಯಿ – ಕರುನಾಡ ನ್ಯೂಸ್


ಧಾರವಾಡ: ಕರ್ನಾಟಕ ಕಾಂಗ್ರೆಸ್‌ ಪಕ್ಷ (Karnataka Congress) ಇಂದು ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಭಜರಂಗ ನಿಷೇಧ ಮಾಡುವ ಪ್ರಸ್ತಾಪವಿದ್ದು, ಇದರ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ” ಹನುಮಂತನ ಭಕ್ತರು ಭಜರಂಗದಳದ ಭಜರಂಗಿಗಳು. ಅದನ್ನು ಬ್ಯಾನ್ ಮಾಡುತ್ತೆವೆ ಎಂದು ಕಾಂಗ್ರೆಸ್ ಅವರು ಹೇಳುತ್ತಿದ್ದಾರೆ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗಿಯುತ್ತಾರೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಧಾರವಾಡದ ನವಲಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಪರವಾಗಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ನ್ಯಾಯ ಎನ್ನುತ್ತಿದ್ದ ಕಾಂಗ್ರೆಸ್ ಅವರು ಮೀಸಲಾತಿ ಹೆಚ್ಚಳದ ನಮ್ಮ ನಿರ್ಧಾರವನ್ನು ಸಂವಿಧಾನ ವಿರೋಧಿ ಎಂದು ಹೇಳಿದರು. ನಾವು ಎಲ್ಲ ಸಮಾಜಗಳಿಗೆ ನ್ಯಾಯ ಕೊಟ್ಟಿದ್ದೀವಿ. ಆದರೆ ಅವರು ಹಿಂಬಾಗಿಲ ಮೂಲಕ ಕೋರ್ಟ್ ಗೆ ಹೋಗಿದ್ದಾರೆ. ಈಗ ಕಾಂಗ್ರೆಸ್ ಅವರು ಬಜರಂಗ ದಳ ನಿಷೇಧ ಮಾಡುವುದಾಗಿ ಹೇಳುತ್ತಾರೆ. ದೇಶದ್ರೋಹ, ಭಯೋತ್ಪಾದನೆ ಮಾಡುವ ಪಿಎಫ್ಐ ಜೊತೆ ಭಜರಂಗದಳವನ್ನು ಸೇರಿಸಿದ್ದಾರೆ. ನಮ್ಮ ಪ್ರಧಾನಿ ಮೋದಿ ಈಗಾಗಲೇ ಪಿಎಫ್ಐ ಬ್ಯಾನ್ ಮಾಡಿದ್ದಾರೆ. ನಮ್ಮ ಪರಂಪರೆ, ನಮ್ಮ ಧರ್ಮ, ನಮ್ಮ ಇತಿಹಾಸವನ್ನು ಗಟ್ಟಿಕೊಳಿಸಿರುವುದು ಭಜರಂಗದಳ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗೀತಾರೆ. ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣ ಆಗ್ತಿದ್ರೆ, ದಕ್ಷಿಣದ ಅಂಜನಾದ್ರಿಯಲ್ಲಿ ಆಂಜನೇಯ ಸ್ವಾಮಿ ಅಭಿವೃದ್ಧಿ ಆಗ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನವಲಗುಂದ ಬಂಡಾಯದ ನಾಡು. ಸ್ವಾತಂತ್ರದ ನಂತರ ರೈತರ ಬಂಡಾಯ ಪ್ರಾರಂಭ ಆಗಿದ್ದು ನವಲಗುಂದ ಮತ್ತು ನರಗುಂದದಿಂದ. ಈ ಭಾಗದ ರೈತರು ಅತ್ಯಂತ ಶ್ರಮ ಜೀವಿಗಳು. ಹಿಂದೆ ಇಲ್ಲಿ ಮಲಪ್ರಭ ಹರಿದರೂ ಈ ಭಾಗದ ಜಮೀನಿಗೆ ನೀರು ಬಂದಿರಲಿಲ್ಲ. ನೀರು ಕೊಡದೇನೇ ರೈತರಿಗೆ ಕರ ವಸೂಲಿ ಮಾಡಿ ಪೊಲೀಸರಿಂದ ರೈತರ ಮೇಲೆ ಗುಂಡು ಹಾಕಿದವರು ಕಾಂಗ್ರೆಸ್ ಪಕ್ಷದವರು ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ಆಡಳಿತದ ಮೇಲೆ ಕಿಡಿ ಕಾರಿದರು.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ