ಎಬಿಡಿ, ಕಿಂಗ್​ ಕೊಹ್ಲಿಯ ವಿಶ್ವ ದಾಖಲೆ ಸರಿಗಟ್ಟಿದ ಜೋ ರೂಟ್ – ಕರುನಾಡ ನ್ಯೂಸ್


Ashes 2023: ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಜೋ ರೂಟ್ (Joe Root) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಎಬಿ ಡಿವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿಯ (Virat Kohli) ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಅಜೇಯ 118 ರನ್ ಬಾರಿಸಿದ್ದ ಜೋ ರೂಟ್, ದ್ವಿತೀಯ ಇನಿಂಗ್ಸ್​ನಲ್ಲಿ 46 ರನ್​ ಬಾರಿಸಿ ಔಟಾಗಿದ್ದರು. ಇದರೊಂದಿಗೆ 2 ಮಾದರಿಯ ಕ್ರಿಕೆಟ್​ನಲ್ಲಿ 50 ರ ಸರಾಸರಿಯಲ್ಲಿ ರನ್ ಕಲೆಹಾಕಿದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸೌತ್ ಆಫ್ರಿಕಾದ ಎಬಿ ಡಿವಿಲಿಯರ್ಸ್ ಈ ಸಾಧನೆ ಮಾಡಿದ್ದರು. ಎಬಿಡಿ 114 ಟೆಸ್ಟ್ ಪಂದ್ಯಗಳಲ್ಲಿ 50.66 ಸರಾಸರಿಯಲ್ಲಿ 8765 ರನ್ ಕಲೆಹಾಕಿದ್ದಾರೆ. ಹಾಗೆಯೇ 228 ಏಕದಿನ ಪಂದ್ಯಗಳಿಂದ 53.5 ಸರಾಸರಿಯಲ್ಲಿ 9577 ರನ್​ಗಳಿಸಿದ್ದಾರೆ.  ವಿರಾಟ್ ಕೊಹ್ಲಿ ಕೂಡ ಈ ಸಾಧನೆ ಮಾಡಿದ್ದು, ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 274 ಪಂದ್ಯಗಳಲ್ಲಿ 57.32 ಸರಾಸರಿಯಲ್ಲಿ 12898 ರನ್​ ಗಳಿಸಿದ್ದರೆ, ಟಿ20 ಕ್ರಿಕೆಟ್​ನಲ್ಲಿ 115 ಇನಿಂಗ್ಸ್​ಗಳಿಂದ 52.74 ಸರಾಸರಿಯಲ್ಲಿ 4008 ರನ್ ಕಲೆಹಾಕಿದ್ದಾರೆ. ಇದೀಗ ಜೋ ರೂಟ್ 131 ಟೆಸ್ಟ್ ಪಂದ್ಯಗಳಲ್ಲಿ 50.76 ಸರಾಸರಿಯಲ್ಲಿ 11168 ರನ್​ಗಳಿಸಿದ್ದರೆ, ಏಕದಿನ ಕ್ರಿಕೆಟ್​ನಲ್ಲಿ 158 ಪಂದ್ಯಗಳಿಂದ 50.06 ಸರಾಸರಿಯಲ್ಲಿ 6207 ರನ್ ಪೇರಿಸಿದ್ದಾರೆ. ಈ ಮೂಲಕ ಎರಡು ಮಾದರಿಯ ಕ್ರಿಕೆಟ್​ನಲ್ಲಿ 50 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್ ಕಲೆಹಾಕಿದ ವಿಶ್ವದ ಮೂರನೇ ಬ್ಯಾಟರ್ ಎಂಬ ವಿಶೇಷ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ