ರಾಯಚೂರು: ಮಧ್ಯಾಹ್ನದ ಬಿಸಿಯೂಟದಲ್ಲಿ (Lunch) ಹಲ್ಲಿ (Lizard) ಪತ್ತೆಯಾಗಿದ್ದು, ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ರಾಯಚೂರು (Raichur) ತಾಲೂಕಿನ ಅಪ್ಪನದೊಡ್ಡಿ (Appanadoddi) ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
50 ಜನ ಮಕ್ಕಳಲ್ಲಿ ಮೂರು ಜನ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಮಧ್ಯಾಹ್ನ ಬಿಸಿಯೂಟಕ್ಕೆ ಉಪ್ಪಿಟ್ಟು ಮಾಡಲಾಗಿತ್ತು. ಊಟ ಸೇವಿಸಿದ ಬಳಿಕ ಮಕ್ಕಳು ಅಸ್ವಸ್ಥರಾಗಿದ್ದು, ಅಡುಗೆ ಪಾತ್ರೆಯ ತಳದಲ್ಲಿ ಹಲ್ಲಿ ಪತ್ತೆಯಾಗಿದೆ. ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡು ಅಸ್ವಸ್ಥರಾದ ಮಕ್ಕಳನ್ನು ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದೆ.