ಉತ್ತರ ಭಾರತದಲ್ಲಿ ಮಳೆಯಿಂದ ಜಲಪ್ರಳಯ – ಈವರೆಗೆ 19 ಬಲಿ, ಇಂದೂ ಭಾರೀ ಮಳೆ ಸಾಧ್ಯತೆ – ಕರುನಾಡ ನ್ಯೂಸ್


ನವದೆಹಲಿ: ಉತ್ತರ ಭಾರತದಲ್ಲಿರುವ (North India) ಹಿಮಾಚಲಪ್ರದೇಶ, ಉತ್ತರಾಖಂಡ್, ಜಮ್ಮುಕಾಶ್ಮೀರ, ಪಂಜಾಬ್, ಹರ್ಯಾಣ ರಾಜ್ಯಗಳು ಕುಂಭದ್ರೋಣ ಮಳೆಗೆ (Heavy Rainfall) ತತ್ತರಿಸಿವೆ. ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ. ಇಂದೂ ದೆಹಲಿ, ಹರ್ಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರವಾಹ, ಭೂಕುಸಿತ ಸಾಮಾನ್ಯ ಎಂಬಂತಾಗಿದ್ದು ಹಿಮಾಚಲದಲ್ಲಂತೂ (Himachal Pradesh) ಅಲ್ಲೋಲಕಲ್ಲೋಲವಾಗಿದೆ. ನದಿಗಳೆಲ್ಲಾ ಅಪಾಯದ ಮಟ್ಟ ಮೀರಿದ್ದು, ಸಿಕ್ಕಿದ್ದನ್ನೆಲ್ಲಾ ಆಪೋಷನ ಪಡೆಯುತ್ತಿವೆ. ಬೀಯಾಸ್ ನದಿ (Beas River) ರಣಾರ್ಭಟಕ್ಕೆ ಕಟ್ಟಡವೊಂದು ಕುಸಿದಿದೆ. ಕುಲು ಬಳಿ ಕಾರುಗಳು ಕೊಚ್ಚಿ ಹೋಗಿದ್ದು, ಶಿಮ್ಲಾದ ಡಿಂಗು ಮಾತೆಯ ಮಂದಿರದ ರಸ್ತೆ ನೋಡನೋಡುತ್ತಲೇ ಕುಸಿದುಬಿದ್ದಿದೆ. ಅಟಲ್ ಸುರಂಗದ (Atal Tunnel) ಬಳಿಯೇ ಗುಡ್ಡ ಕುಸಿತವಾಗಿದ್ದು ಕುಲು-ಮನಾಲಿ ನಡುವಿನ ರಸ್ತೆ ಬಂದ್ ಆಗಿದೆ.  ಪಂಧೋ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನೀರು ಹೊರಗೆ ಬಿಡಲಾಗಿದ್ದು, ಸಣ್ಣ ಸೇತುವೆಯೊಂದು ಮಾಯವಾಗಿದೆ. ಪಂಚವಕ್ತ್ರ ಎಂಬಲ್ಲಿ ಮರದ ದಿಮ್ಮಿಗಳ ಸಮೇತ ಜಲರಕ್ಕಸ ನಗರಕ್ಕೆ ನುಗ್ಗಿದೆ. ನಿರಂತರ ಗುಡ್ಡ ಕುಸಿತದ ಪರಿಣಾಮ ಮಾರ್ಗಮಧ್ಯೆಯೇ ಸಾವಿರಾರು ವಾಹನ ಸಿಲುಕಿವೆ. ಊಟ ನೀರಿಲ್ಲದೇ ಪ್ರವಾಸಿಗರು ಒದ್ದಾಡುವಂತಾಗಿದೆ. ಪ್ರವಾಹ, ಭೂಕುಸಿತದ ಪರಿಣಾಮ 700ಕ್ಕೂ ಹೆಚ್ಚು ರಸ್ತೆಗಳು ಬಂದ್ ಆಗಿವೆ. ಹಿಮಾಚಲದಲ್ಲಿ ರೆಡ್ ಅಲರ್ಟ್ ಪ್ರಕಟಿಸಲಾಗಿದ್ದು,

2 ದಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಾಖಂಡ್‍ನ (Uttarakhand) ಉಧಾಂಸಿಂಗ್‍ನಗರದಲ್ಲಿ ಮನೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ತೆಹ್ರಿಯಲ್ಲಿ ದಕ್ಷಿಣ ಭಾರತೀಯರಿದ್ದ ಪ್ರವಾಸಿ ವಾಹನವೊಂದು ಅಪಘಾತಕ್ಕೀಡಾಗಿದೆ. 11 ಮಂದಿ ಪೈಕಿ ಐವರನ್ನು ರಕ್ಷಣೆ ಆಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆದಿದೆ. ಜಮ್ಮು ಕಾಶ್ಮೀರದ (Jammu Kashmir) ಪೋಶನಾ ನದಿಯಲ್ಲಿ ಇಬ್ಬರು ಯೋಧರು ಕೊಚ್ಚಿಕೊಂಡು ಹೋಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ 44 ಹಲವೆಡೆ ಸಮಸ್ಯೆಯಾಗಿದೆ. ಪಂಜಾಬ್‍ನ ಮೊಹಾಲಿ ಜಲಾವೃತವಾಗಿದ್ದು, ಅಪಾರ್ಟ್‍ಮೆಂಟ್‍ಗಳು ಜಲದಿಗ್ಬಂಧನದಲ್ಲಿವೆ. ಬೋಟ್‍ಗಳ ಮೂಲಕ ಜನರನ್ನ ರಕ್ಷಿಸಲಾಗುತ್ತಿದೆ.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ