ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾ ನಟನೊಬ್ಬನ ಗೋಲ್ಡ್ ಕಾಯಿನ್ ಮತ್ತು ಗೋಲ್ಡ್ ಬಿಸ್ಕೆಟ್ ರಿಲೀಸ್ ಆಗಿದೆ. ಮೊನ್ನೆಯಷ್ಟೇ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾಗೆ ಪ್ರವಾಸ ಬೆಳೆಸಿದ್ದರು. ಅಲ್ಲಿ ಬಂಗಾರದ ಅಂಗಡಿಯ ಉದ್ಘಾಟನೆಯನ್ನು ಅವರು ಮಾಡಿದ್ದರು. ಅದೇ ಅಂಗಡಿಯವರು ರಾಕಿಭಾಯ್ (Rakibhai) ಯಶ್ ಹೆಸರಿನಲ್ಲಿ ಗೋಲ್ಡ್ ಕಾಯಿನ್ ಮತ್ತು ಬಿಸ್ಕೆಟ್ (Gold Biscuit) ಬಿಡುಗಡೆ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಲೇಷ್ಯಾಗೆ ಹೋಗಿರುವ ಸಂದರ್ಭದಲ್ಲೇ ಯಶ್ ತಮ್ಮ ಮುಂದಿನ (New Movie) ಸಿನಿಮಾದ ಬಗ್ಗೆ ಮತ್ತೊಂದು ಅಪ್ ಡೇಟ್ (Update) ನೀಡಿದ್ದಾರೆ. ಮಲೇಷ್ಯಾದಲ್ಲಿ ಹೊಸ ಸಿನಿಮಾದ ಕುರಿತು ಮಾತನಾಡಿರುವ ಯಶ್, ‘ದೊಡ್ಡ ಸಿನಿಮಾವನ್ನು ಮಾಡುತ್ತೇನೆ ಎಂದು ಹೇಳುತ್ತಿಲ್ಲ, ಒಳ್ಳೆಯ ಸಿನಿಮಾ ಮಾಡಲು ಪ್ರಯತ್ನಿಸುತ್ತಿದ್ದೇನೆ.

ಅದೊಂದು ಮಾಸ್ ಸಿನಿಮಾವಾಗಿರಲಿದೆ. ಸದ್ಯದಲ್ಲೇ ಮಾಹಿತಿ ನೀಡುತ್ತೇನೆ’ ಎಂದು ಮಾತನಾಡಿದ್ದಾರೆ ರಾಕಿಭಾಯ್ ಯಶ್ (Yash) ಮೊನ್ನೆ ಮಲೇಷ್ಯಾಗೆ ಹಾರಿದ್ದರು. ನಾಲ್ಕೈದು ಗೆಳೆಯರೊಂದಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಅವರು, ಮಲೇಷ್ಯಾದಲ್ಲಿ (Malaysia) ಚಿನ್ನದ ಅಂಗಡಿಯೊಂದರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ, ಮಲೇಷ್ಯಾದಲ್ಲಿ ವಾಸವಿರುವ ಅವರ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಶ್ ಅವರಿಗೆ ನೀಡಲಾದ ಗಿಫ್ಟ್ (Gift) ಸಾಕಷ್ಟು ವೈರಲ್ ಕೂಡ ಆಗಿದೆ. ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು (Group Photo) ಪ್ರಸಿದ್ಧ ಕಲಾವಿದರ ಜೊತೆ ಪೇಟಿಂಗ್ ಮಾಡಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಆ ಫೋಟೋವನ್ನು ಅವರೇ ಬಿಡುಗಡೆಗೊಳಿಸಿ ಬೆರಗಿನಿಂದ ನೋಡಿದರು ಯಶ್. ಆ ವಿಡಿಯೋ ಕೂಡ ವೈರಲ್ ಆಗಿದೆ
The post ರಾಕಿಭಾಯ್ ಹೆಸರಿನಲ್ಲಿ ಗೋಲ್ಡ್ ಕಾಯಿನ್, ಬಿಸ್ಕೆಟ್ appeared first on ಕರುನಾಡ ನ್ಯೂಸ್.