ಉಡುಪಿ: ಅಪಘಾತವೊಂದರಲ್ಲಿ ಟಿಪ್ಪರ್ ಲಾರಿ (Tipper Lorry) ಹಿಂಭಾಗದಲ್ಲಿ ಸಿಲುಕಿಕೊಂಡಿದ್ದ ಕಾರನ್ನು (Car) ಕಿಲೋಮೀಟರ್ ಗಟ್ಟಲೆ ಎಳೆದೊಯ್ದ ಘಟನೆ ಉಡುಪಿಯಲ್ಲಿ (Udupi) ನಡೆದಿದೆ. ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟಿಪ್ಪರ್ ಚಾಲಕನ ವಿರುದ್ಧ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಮತ್ತು ಟಿಪ್ಪರ್ ಡಿಕ್ಕಿಯಾಗಿದೆ. ಉಡುಪಿ ಜಿಲ್ಲೆ ಬೆಳ್ಮಣ್‌ನಿಂದ ದಕ್ಷಿಣ ಕನ್ನಡ ಜಿಲ್ಲೆ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿದೆ ಎಂಬುದು ಪ್ರಾಥಮಿಕ ಮಾಹಿತಿ. ಅಪಘಾತವಾಗುತ್ತಿದ್ದಂತೆ ವಾಹನದ ವೇಗ ಹೆಚ್ಚಿಸಿದ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಕಾರು ಟಿಪ್ಪರ್ ಹಿಂಭಾಗಕ್ಕೆ ಸಿಲುಕಿಕೊಂಡಿದ್ದ ವಿಚಾರ ಚಾಲಕನ ಗಮನಕ್ಕೆ ಬಂದಿರಲಿಲ್ಲ.