ಕೇರಳದ ಮಾಜಿ‌ ಮುಖ್ಯ ಮಂತ್ರಿ ವಿಧಿವಶ – ಕರುನಾಡ ನ್ಯೂಸ್


ಕೇರಳ: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಉಮ್ಮನ್ ಚಾಂಡಿನ್ ನಿಧನ ವಾರ್ತೆಯನ್ನು ಅವರ ಪುತ್ರ ಫೇಸ್‌ಬುಕ್ ಪೋಸ್ಟ್‌ ಮೂಲಕ ತಿಳಿಸಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚಾಂಡಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿತ್ತು. ಉಮ್ಮನ್ ಚಾಂಡಿ, ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿದ್ದರು. 2004ರಿಂದ 2006ರವರೆಗೆ ಮೊದಲ ಬಾರಿ ಸಿಎಂ ಆಗಿದ್ದರು. ಬಳಿಕ 2011ರಿಂದ 2016ರ ವರೆಗೆ ಎರಡನೇ ಬಾರಿಗೆ ಅಧಿಕಾರ ನಡೆಸಿದ್ದರು. ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಉಮ್ಮನ್ ಚಾಂಡಿ, 1970ರಿಂದ ಕೇರಳ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ