ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜುಲೈ 25 ರಂದು ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.