ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜದಲ್ಲಿ ತಾತ್ಕಾಲಿಕ ಟ್ರಕ್ಕಿಂಗ್ ಬ್ಯಾನ್ – ಕರುನಾಡ ನ್ಯೂಸ್


ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆ (Rain) ಪ್ರಮಾಣ ಬಹುತೇಕ ಇಳಿಮುಖವಾದರೂ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಪ್ರವಾಸಿ ತಾಣಗಳಲ್ಲಿ ಬೆಟ್ಟಗುಡ್ಡಗಳು ಕುಸಿಯೋದು, ಮರಗಳು ಮುರಿದು ಬೀಳೋದು ಇನ್ನೂ ನಿಂತಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಿಗರ ಹಿತದೃಷ್ಠಿಯಿಂದ ಮೂಡಿಗೆರೆ (Mudigere) ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜ (Ettina Bhuja) ತಾಣಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಎತ್ತಿನಭುಜ ಪ್ರವಾಸಿ ತಾಣಕ್ಕೆ ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಟ್ರಕ್ಕಿಂಗ್ ತೆರಳಲು ಉತ್ತಮವಾದ ತಾಣವಾಗಿರುವುದರಿಂದ ನಿತ್ಯ ನೂರಾರು ಜನ ಚಾರಣಕ್ಕೆ ಕೂಡ ಹೋಗುತ್ತಾರೆ. ಆದರೆ ಮೂಡಿಗೆರೆ ತಾಲೂಕಿನ ಈ ಭಾಗದಲ್ಲಿ ಕಳೆದ 15 ದಿನಗಳಿಂದ ಅತಿಯಾಗಿ

ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಬೆಟ್ಟ-ಗುಡ್ಡಗಳು ಕುಸಿಯುತ್ತಿವೆ. ರಸ್ತೆ ಬದಿಯ ವಿದ್ಯುತ್ ಕಂಬಗಳು, ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಜೊತೆಗೆ ಕೆಲ ಹುಚ್ಚು ಪ್ರವಾಸಿಗರು ವಿಭಿನ್ನ ಭಂಗಿಯಲ್ಲಿ ಫೋಟೋ ತೆಗೆಯಲು ಹೋದಾಗ ಅಪಾಯಗಳು ಸಂಭವಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ಅಪಾಯ ಸಂಭವಿಸಿದಾಗ ತುರ್ತಾಗಿ ಸಹಾಯಕ್ಕೆ ಘಟನಾ ಸ್ಥಳಕ್ಕೆ ಹೋಗುವುದು ಕೂಡ ಕಷ್ಟ. ಹೀಗಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಆದೇಶದಂತೆ ಮೂಡಿಗೆರೆ ವಲಯ ಅರಣ್ಯಾಧಿಕಾರಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೀತಿಯ ಪ್ರಾಣಹಾನಿ ಮತ್ತು ಅಪಾಯವನ್ನು ತಡೆಗಟ್ಟುವ ದೃಷ್ಟಿಯಿಂದ ಎತ್ತಿನಭುಜಕ್ಕೆ ಚಾರಣ ಹೋಗುವುದಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದಾರೆ.

Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ