ಮುಂಬೈ: ನಗರದ ಕಾಲೇಜೊಂದರಲ್ಲಿ (College) ವಿದ್ಯಾರ್ಥಿನಿಯರು ಬುರ್ಖಾ (Burqa) ಧರಿಸಿ ಬಂದಿದ್ದಕ್ಕೆ ಅವರನ್ನು ಕ್ಯಾಂಪಸ್‌ಗೆ ಪ್ರವೇಶಿಸಲು ನಿರ್ಬಂಧಿಸಲಾಗಿದ್ದು, ಬಳಿಕ ವಿಚಾರ ತಿಳಿದ ಪೋಷಕರು ವಿದ್ಯಾರ್ಥಿಗಳೊಂದಿಗೆ ಸೇರಿ ಕಾಲೇಜು ಬಳಿ ಭಾರೀ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಘಟನೆ ಚೆಂಬೂರಿನ ಕಾಲೇಜಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ತಡೆದಿದ್ದು, ಬುರ್ಖಾಗಳನ್ನು ತೆಗೆದುಹಾಕಿದರೆ ಮಾತ್ರವೇ ಒಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.