ಹಾಸನ: ಕದ್ದ ದ್ವಿಚಕ್ರ ವಾಹನವನ್ನು ಮನೆ ಮುಂದೆ ಬಿಟ್ಟು ನಿಲ್ಲಿಸಿದ್ದ ಕಾರೊಂದನ್ನು ಕಳ್ಳರು ಎಗರಿಸಿರುವ ಘಟನೆ ಹಾಸನ ನಗರದ ವಾರ್ಡ್ ನಂಬರ್ 35 ಕೆ. ಹೊಸಕೊಪ್ಪಲಿಯಲ್ಲಿ ನಡೆದಿದೆ.
ಅಭಿಷೇಕ್ ಎಂಬುವವರ ಮಾರುತಿ 800 ಕಾರನ್ನು ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ಜುಲೈ 30ರಂದು ಮುಂಜಾನೆ 4 ಗಂಟೆಗೆ ಬೈಕ್‌ನಲ್ಲಿ ಬಂದಿದ್ದ ಕಳ್ಳರು ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಎಗರಿಸಿದ್ದಾರೆ. ಮೊದಲಿಗೆ ಕಾರಿನ ಡೋರ್ ತೆಗೆದು ಸ್ಟಾರ್ಟ್ ಮಾಡಲು ಯತ್ನಿಸಿದ್ದು, ಸಾಧ್ಯವಾಗದೇ ಇದ್ದಾಗ ಅದನ್ನು ಸ್ವಲ್ಪ ದೂರ ತಳ್ಳಿಕೊಂಡು ಹೋಗಿದ್ದಾರೆ. ಬಳಿಕ ಕಾರು ಸ್ಟಾರ್ಟ್ ಆಗಿದ್ದು, ಅಲ್ಲಿಂದ ಪರಾರಿಯಾಗಿದ್ದಾರೆ. ಮೊದಲಿಗೆ ಬೈಕ್‌ನಲ್ಲಿ ಬಂದಿದ್ದ ಚೋರರು ಬೈಕ್ ಅನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬಳಿಕ ಬೈಕ್ ಕೂಡಾ ಕಳ್ಳತನ ಮಾಡಿರುವುದು ತಿಳಿದುಬಂದಿದೆ.ಕಾರು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.