ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ 2023: 4-0 ಗೋಲುಗಳ ಅಂತರದಲ್ಲಿ ಪಾಕ್‌ ಮಣಿಸಿದ ಭಾರತ – ಕರುನಾಡ ನ್ಯೂಸ್


ಚೆನ್ನೈ: ಚೆನ್ನೈನಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ (Asian Champions Trophy Hockey 2023) ಭಾರತ 4-0 ಗೋಲುಗಳಿಂದ ಪಾಕಿಸ್ತಾನವನ್ನು ಮಣಿಸಿತು. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (Pakistan) ವಿರುದ್ಧ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ (India) 4-0 ಮುನ್ನಡೆಯೊಂದಿಗೆ ಹಿಡಿತ ಸಾಧಿಸಿದೆ. ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಸಿಂಗ್ (Harmanpreet Singh) ಎರಡು ಗೋಲು ಗಳಿಸಿದರೆ, ಜುಗರಾಜ್ ಸಿಂಗ್ ಮತ್ತು ಅಮನ್‌ದೀಪ್ ಸಿಂಗ್ ತಲಾ ಒಂದು ಗೋಲು ಗಳಿಸಿ ಮಿಂಚಿದರು. ಟೂರ್ನಿಯ ಸೆಮಿಫೈನಲ್‌ಗೆ ಈಗಾಗಲೇ ಅರ್ಹತೆ ಪಡೆದಿರುವ ಭಾರತ, ಲೀಗ್ ಹಂತದ ಅಂತ್ಯಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ, ಪಾಕಿಸ್ತಾನವು ದೊಡ್ಡ ಸೋಲಿನೊಂದಿಗೆ ಪಂದ್ಯಾವಳಿಯಿಂದ ಹೊರಗುಳಿಯಿತು.

Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ