ಬೆಂಗಳೂರು: ನಟಿ, ಮಾಜಿ ಸಚಿವೆ ಉಮಾಶ್ರೀ (Umashree) ಸೇರಿದಂತೆ ಮೂವರು ವಿಧಾನಪರಿಷತ್ (Vidhanaparishad) ಸ್ಥಾನಕ್ಕೆ ನಾಮ ನಿರ್ದೇಶನಗೊಂಡಿದ್ದಾರೆ. ಮಾಜಿ ಸಚಿವೆ ಉಮಾಶ್ರೀ, ಎಂ.ಆರ್.ಸೀತಾರಾಂ (MR Seetharam) ಹಾಗೂ ಸುಧಾಮ್‍ದಾಸ್ (Sudhamdas) ಪರಿಷತ್ ಅವರನ್ನು ಕಾಂಗ್ರೆಸ್ (Congress) ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಿದೆ. ಈ ಕುರಿತು ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದೆ. ಈ ಮೂಲಕ ಕಾಂಗ್ರೆಸ್‍ನಿಂದ ಮೂವರು ಮೇಲ್ಮನೆಗೆ ಪ್ರವೇಶ ಪಡೆದಿದ್ದಾರೆ. ಮೂವರ ನಾಮನಿರ್ದೇಶನದ ಬೆನ್ನಲ್ಲೇ ಅಸಮಾಧಾನದ ಹೊಗೆ ಎದ್ದಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿತ ಸುಧಾಮ್ ದಾಸ್ ನೇಮಕಕ್ಕೆ ಹಿರಿಯ ಸಚಿವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ವಿಧಾನ ಪರಿಷತ್ ಸದಸ್ಯ ಸ್ಥಾನ ನಾಮನಿರ್ದೇಶನಕ್ಕೆ ಆಕ್ಷೇಪಿಸಿ ರಾಜ್ಯಪಾಲರಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಜನ ಜಾಗೃತಿ ವೇದಿಕೆ ಮತ್ತು ನ್ಯಾಯಮಿತ್ರ ಸಂಘಟನೆಯ ಕಾರ್ಯದರ್ಶಿ ರಾಘವಾಚಾರ್ ಶಾಸ್ತ್ರಿ ದೂರು ನೀಡಿದ್ದರು. ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯಪಾಲರು, ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚನೆ ನೀಡಿದ್ದರು. ಈ ಎಲ್ಲದರ ನಡುವೆ ಇಂದು ರಾಜ್ಯಪಾಲರು ಪಟ್ಟಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.