ಕೊಡಗು: ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲಾ ಅಧ್ಯಾಪಕರಿಗೆ ಬೀಳ್ಕೊಡುಗೆ ಸಮಾರಂಭ, ಶಿಕ್ಷಕರ ಸೇವಾ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘನೆ ಮಾಡಿದ ಗಣ್ಯರುಗಳು – ಕರುನಾಡ ನ್ಯೂಸ್


ಕೊಡಗು ಜಿಲ್ಲಾ ಕೊಂಡಂಗೇರಿ ಗ್ರಾಮದ ಎಲಿಯಂಗಾಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ 14 ವರ್ಷಗಳಿಂದ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಸುಬ್ರಹ್ಮಣ್ಯ ,ಹಾಗೂ ಸಹ ಶಿಕ್ಷಕ ನಟರಾಜ್ ಬೇರೆಡೆಗೆ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಮತ್ತು ಊರಿನ ಗಣ್ಯರು ಸೇರಿ ಅಧ್ಯಾಪಕರುಗಳನ್ನು ಬೀಳ್ಕೊಡುಗೆ ಸಮಾರಂಭವನ್ನು ಆಗಸ್ಟ್ 29 ರಂದು ಶಾಲಾ ಸಭಾಂಗಣದಲ್ಲಿ ನಡೆಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ವತಿಯಿಂದ ಅಧ್ಯಾಪಕರುಗಳನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಲುಗುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಪಂದಿ ಕಂಡ ದಿನೇಶ್,ಉಪಾಧ್ಯಕ್ಷರಾದ ಆಮಿನಾ ಸಂಶುದ್ದೀನ್,ಸದಸ್ಯರುಗಳಾದ ಅಂದಾಯಿ ಅಬ್ದುಲ್ ರಹಮಾನ್, ಹಾಗೂ ಸ್ಥಳೀಯ ಮುಖಂಡರಾದ ಪಿ ಎ ಯೂಸುಫ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರುಗಳು ಬೀಳ್ಕೊಡುಗೆ ಸ್ವೀಕರಿಸಿದ ಶಿಕ್ಷಕರು ಕಳೆದ ಹಲವಾರು ವರ್ಷಗಳಿಂದ ಸಲ್ಲಿಸಿದ ಉತ್ತಮ ಸೇವೆಗಳ ಕುರಿತು ಮಾತನಾಡಿ ಅವರ ಸೇವಾ ಅವಧಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ವಿದ್ಯಾರ್ಥಿಗಳ ಪೋಷಕ ವಿರುದ್ಧದವರು, ಊರಿನ ಇನ್ನಿತರ ಮುಖಂಡರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾಗಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ ಪಿ ಎ ಹಂಝ ರವರನ್ನು ಶಿಕ್ಷಕರ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ