ಜೋಹಾನ್ಸ್‌ಬರ್ಗ್‌ನಲ್ಲಿ ಭೀಕರ ಅಗ್ನಿ ದುರಂತ – 63 ಮಂದಿ ದುರ್ಮರಣ – ಕರುನಾಡ ನ್ಯೂಸ್


ಕೇಪ್‌ಟೌನ್: ದಕ್ಷಿಣ ಆಫ್ರಿಕಾದ (South Africa) ಜೋಹಾನ್ಸ್‌ಬರ್ಗ್‌ನ (Johannesburg) 5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ (Fire) ದುರಂತ ಸಂಭವಿಸಿ 63 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆಯೆಂದು ತುರ್ತು ನಿರ್ವಾಹಣಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ಬಹುಮಟ್ಟಿಗೆ ನಂದಿಸಲಾಗಿದೆ. ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅಗ್ನಿಶಾಮಕ ದಳ ಹಾಗೂ ತುರ್ತು ವಾಹನಗಳು ಕಾರ್ಯಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಕಟ್ಟಡದಲ್ಲಿ ಸುಮಾರು 200 ಜನರು ವಾಸವಿದ್ದರು ಎನ್ನಲಾಗಿದೆ. ಭಾರೀ ಬೆಂಕಿಗೆ ಕಾರಣ ಹಾಗೂ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ.

Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ