ಚೆಟ್ಟಳ್ಳಿ ಅ.19 : ಕಂಡಕರೆಯ ಗಾಂಧಿ ಯುವಕ ಸಂಘದ ವತಿಯಿಂದ ಪ್ರಥಮ ವರ್ಷದ ಅಂಡರ್- 20 ಕಾಲ್ಚೆಂಡು ಪಂದ್ಯಾಕೂಟ ಚೆಟ್ಟಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅ.23 ಹಾಗೂ ಅ.24 ರಂದು ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಷರೀಫ್ ಪಿ.ಎಂ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅ.23 ಬೆಳಗ್ಗೆ 9 ಗಂಟೆಗೆ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪನವರು ಫುಟ್ಬಾಲ್ ಪಂದ್ಯಾವಳಿಯನ್ನು ಉದ್ಘಾಟನೆ ಮಾಡಲಿದ್ದಾರೆ,


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಾಂಧಿ ಯುವಕ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ ಶಶಿಕುಮಾರ್, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ರಸೀನಾ, ಗಾಂಧಿ ಯುವಕ ಸಂಘದ ಸಂಘಟನಾ ಕಾರ್ಯದರ್ಶಿ ಸುಹೈಲ್ ಓ.ಎಸ್ ಭಾಗವಹಿಸಲಿದ್ದಾರೆ.
ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ ಶಶಿಕುಮಾರ್ ರವರನ್ನು ಗಾಂಧಿ ಯುವಕ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಒಟ್ಟು 30 ತಂಡಗಳು ಭಾಗವಹಿಸಲಿದ್ದು, ಅ.24 ಸೋಮವಾರ ಫೈನಲ್ ಪಂದ್ಯಾವಳಿ ನಡೆಯಲಿದೆ ಎಂದು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಷರೀಫ್ ಪಿ.ಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.