ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದ ಪವನ್ ಕಲ್ಯಾಣ್ ಬಂಧಿಸಿದ ಆಂಧ್ರ ಪೊಲೀಸರು – ಕರುನಾಡ ನ್ಯೂಸ್


ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು (Chandra Babu Naidu) ಅವರು ಬಂಧಿಸಿರುವುದು ಆಂದ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ನೂರಾರು ಕೋಟಿ ಭ್ರಷ್ಟಾಚಾರ ಆರೋಪದಲ್ಲಿ ಚಂದ್ರಬಾಬುರನ್ನ ಬಂಧಿಸಿರೋದನ್ನ ಖಂಡಿಸಿ, ಅವರಿಗೆ ಬೆಂಬಲ ಸೂಚಿಸಲು ತೆರಳುತ್ತಿದ್ದ ಪವನ್ ಕಲ್ಯಾಣ್- ಜನಸೇನಾ ಪಕ್ಷದ ಹಿರಿಯ ನಾಯಕ ನಾದೆಂಡ್ಲ ಮನೋಹರ್ ಅವರನ್ನು ಎನ್‌ಟಿಆರ್ ಜಿಲ್ಲೆಯಲ್ಲಿ ಆಂಧ್ರ ಪೊಲೀಸರು (ಸೆ.10) ಬಂಧಿಸಿದ್ದಾರೆ.

https://youtube.com/@ubi_talks?si=MF5oTr-nOBkhNoJA

ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ (Pawan Kalyan) ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಿದ್ದಾರೆ. ಪವನ್‌ರನ್ನು ಬಂಧಿಸಿರೋದರ (Arrest) ಬಗ್ಗೆ ಭಾನುವಾರ (ಸೆ.10) ಆಂಧ್ರ ಪೊಲೀಸರು ತಿಳಿಸಿದ್ದು, ಅವರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿದ್ದರು. ಮಾಜಿ ಸಿಎಂ ಬೆಂಬಲಿಸಲು ವಿಜಯವಾಡಕ್ಕೆ ತೆರಳಲು ಪವನ್ ಯತ್ನಿಸಿದ್ದರು. ಈ ವೇಳೆ ಪವನ್- ಪೊಲೀಸರು ನಡುವೆ ವಾಗ್ವಾದ ನಡೆದಿತ್ತು. ಇನ್ನೂ ವಿಶೇಷ ವಿಮಾನದ ಮೂಲಕ ಹೈದರಾಬಾದ್‌ನಿಂದ ತೆರಳಲು ಮುಂದಾಗಿದ್ದ ಪವನ್‌ರನ್ನು (Pawan Kalyan) ಪೊಲೀಸರು ತಡೆ ನೀಡಿದ್ದರು. ಅಲ್ಲಿಗೆ ಸುಮ್ಮನಾಗದೇ ಬಳಿಕ ರಸ್ತೆ ಮಾರ್ಗದ ಮೂಲಕ ಪವನ್ ವಿಜಯವಾಡದತ್ತ ಪ್ರಯಾಣಿಸಿದ್ದಾರೆ. ಶನಿವಾರದಂದು 2 ಬಾರಿ ಎನ್‌ಟಿಆರ್ ಜಿಲ್ಲೆಯಲ್ಲಿ ಅವರ ವಾಹನವನ್ನು ತಡೆಹಿಡಿಯಲಾಯಿತು. ಬಳಿಕ, ಇಂದು (ಸೆ.10) ವಿಜಯವಾಡದ ಮಂಗಳಗಿರಿ ಕಡೆಗೆ ನಡೆದುಕೊಂಡೇ ತೆರಳಲು ಪವನ್ ಕಲ್ಯಾಣ್ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ತಡೆ ಹಾಕಿದ ಹಿನ್ನೆಲೆಯಲ್ಲಿ ಪವನ್ ಕಲ್ಯಾಣ್ ಅವರು ಅನುಮಂಚಿಪಲ್ಲಿಯಲ್ಲಿ ರಸ್ತೆಯ ಮೇಲೆ ಮಲಗಿಸಿ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋದ ಕಾರಣ ಮುಂಜಾಗ್ರತಾ ಕ್ರಮವಾಗಿ ಪವನ್‌ರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಬಂಧನದ ಬಗ್ಗೆ ಅಧಿಕೃತವಾಗಿ ನಂದಿಗಾಮ ಉಪವಿಭಾಗದ ಪೊಲೀಸ್ ಅಧಿಕಾರಿ ಜನಾರ್ಧನ್ ನಾಯ್ಡು ತಿಳಿಸಿದ್ದಾರೆ.

Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ