ಬೆಂಗಳೂರು: ಕಾವೇರಿ ಹೋರಾಟದ (Cauvery Protest) ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರು ಬಂದ್‍ಗೆ ಕರೆ ಕೊಟ್ಟಿದ್ದು, ಆದರೆ ಎಂದಿನಂತೆ ನಗರದಲ್ಲಿ ಬಸ್ ಸಂಚಾರ ಇರಲಿದೆ ಎಂದು ಬಿಎಂಟಿಸಿ (BMTC) ಸ್ಪಷ್ಟನೆ ನಿಡಿದೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಬಿಎಂಟಿಸಿ, ಕಾವೇರಿ ನೀರಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಸೆ. 26ರಂದು ಬೆಂಗಳೂರು ಬಂದ್‍ಗೆ ಕರೆ ನೀಡಿವೆ. ಆದರೆ ಎಂದಿನಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲ್ಲಾ ಮಾರ್ಗಗಳನ್ನು ಕಾರ್ಯಚರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ. ಬಿಎಂಟಿಸಿ ಹಾಗೂ ಕೆಎಸ್‍ಆರ್ ಟಿಸಿ ನೌಕರರ ಸಂಘದಿಂದ ಬಂದ್ ಗೆ ಬೆಂಬಲ ನೀಡುವುದಾಗಿ ತಿಳಿಸಲಾಗಿತ್ತು. ನಾಳೆ ಬಿಎಂಟಿಸಿ ಬಸ್‍ಗಳನ್ನ ರಸ್ತೆಗೆ ಇಳಿಸಲ್ಲ. ಸರ್ಕಾರಕ್ಕೆ ಬಿಸಿ ಮುಟ್ಟಿಸೋಕೆ ನಾವು ಬೆಂಬಲ ನೀಡ್ತೀವಿ. ನಮ್ಮ ಮೇಲೆ ಶಿಸ್ತು ಕ್ರಮ ಆದ್ರೂ ಪರವಾಗಿಲ್ಲ. ನಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಿದರೂ, ನಾವು ಕೇರ್ ಮಾಡಲ್ಲ. ಬೆಳಗ್ಗೆ 6 ರಿಂದ ಸಂಜೆ 6 ವರೆಗೆ ಬಸ್ ಗಳನ್ನು ರೋಡ್‍ಗೆ ಇಳಿಸಲ್ಲ ಎಂದು ಹೇಳಿತ್ತು. ಆದರೆ ಇದೀಗ ಬಿಎಂಟಿಸಿ ಎಂದಿನಂತೆ ಕಾರ್ಯಾಚರಿಸಲಿದೆ ಎಂದು ಸ್ಪಷ್ಟಪಡಿಸಿದೆ.