ರಾತ್ರಿಯಿಡೀ AC ಆನ್ ಮಾಡಿ ಮಲಗಿದ ವೈದ್ಯ – ಎರಡು ನವಜಾತ ಶಿಶುಗಳು ಸಾವು


ಲಕ್ನೋ: ಖಾಸಗಿ ಕ್ಲಿನಿಕ್‌ನಲ್ಲಿ (Clinic) ವೈದ್ಯ ಹವಾನಿಯಂತ್ರಣವನ್ನು (AC) ರಾತ್ರಿಯಿಡೀ ಆನ್ ಮಾಡಿ ಮಲಗಿದ ಪರಿಣಾಮ ಎರಡು ನವಜಾತ ಶಿಶುಗಳು (Newborn Baby) ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ (Uttar Pradesh) ಶಾಮ್ಲಿ (Shamli) ಜಿಲ್ಲೆಯಲ್ಲಿ ನಡೆದಿದೆ. ಕ್ಲಿನಿಕ್‌ನ ಮಾಲೀಕ ಡಾಕ್ಟರ್ (Doctor) ನೀತು, ಚೆನ್ನಾಗಿ ನಿದ್ದೆ ಮಾಡುವ ಸಲುವಾಗಿ ಹವಾನಿಯಂತ್ರಣ (ಎಸಿ) ಆನ್ ಮಾಡಿದ್ದಾನೆ. ತಂಪು ವಾತಾವರಣದಿಂದಾಗಿ ಎರಡು ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನವಜಾತ ಶಿಶುಗಳು ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಜನಿಸಿದ್ದು, ಅದೇ ದಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಕ್ಕಳನ್ನು ಚಿಕಿತ್ಸೆಗೆಂದು ಫೋಟೋಥೆರಪಿ ಘಟಕದಲ್ಲಿ ಇರಿಸಲಾಗಿತ್ತು. ಈ ವೇಳೆ ವೈದ್ಯ ಮಲಗಲೆಂದು ಎಸಿ ಆನ್ ಮಾಡಿದ್ದು, ಮರುದಿನ ಬೆಳಗ್ಗೆ ಕುಟುಂಬಸ್ಥರು ಮಕ್ಕಳನ್ನು ನೋಡಲೆಂದು ಹೋದಾಗ ಎರಡೂ ಶಿಶುಗಳು ಶವವಾಗಿ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಮೃತ ಶಿಶುಗಳ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದು, ವೈದ್ಯನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ವೈದ್ಯನ ವಿರುದ್ಧ ಐಪಿಸಿ ಸೆಕ್ಷನ್ 304 ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಎಸ್‌ಹೆಚ್‌ಒ ನೇತ್ರಪಾಲ್ ಸಿಂಗ್ ತಿಳಿಸಿದ್ದಾರೆ





Source link

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ