ಐಸಿಸಿ ರ‍್ಯಾಂಕಿಂಗ್​ ಪಟ್ಟಿ ಪ್ರಕಟ; ಅಗ್ರಸ್ಥಾನ ಅಲಂಕರಿಸಿದ ಐವರು ಭಾರತೀಯರು

ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದ್ದು, ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾದ ಐವರು ಆಟಗಾರರು ಅಗ್ರಸ್ಥಾನ ಅಲಂಕರಿಸಿರುವುದು ಮತ್ತಷ್ಟು ವಿಶೇಷವೆನಿಸಿದೆ.

ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಶುಭಮನ್ ಗಿಲ್, ಟಿ-20 ಬ್ಯಾಟ್ಸ್ಮನ್ಗಳ ಪೈಕಿ ಸೂರ್ಯಕುಮಾರ್ ಯಾದವ್, ಆಲ್ರೌಂಡರ್ಗಳ ಪೈಕಿ ರವೀಂದ್ರ ಜಡೇಜಾ, ಟೆಸ್ಟ್ ಬೌಲರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್, ಟಿ20 ಬೌಲರ್ಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ರವಿ ಬಿಷ್ಣೋಯ್ ಮೊದಲ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 223 ರನ್ಗಳನ್ನು ಬಾರಿಸಿ ಅಬ್ಬರಿಸಿದ್ದ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್ ರ‍್ಯಾಂಕಿಂಗ್ನಲ್ಲಿ 7ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟಿ20 ಆಲ್ರೌಂಡರ್ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಯುವ ಸ್ಪಿನ್ನರ್ ಇದೀಗ ಅಫ್ಘಾನಿಸ್ತಾನದ ರಶೀದ್ ಖಾನ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ.ಇದಲ್ಲದೆ ಭಾರತದ ರುತುರಾಜ್ ಗಾಯಕ್ವಾಡ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಟಾಪ್ 10ನಲ್ಲಿ ಸ್ಥಾನ ಪಡೆದಿರುವ ಇತರೆ ಆಟಗಾರರು.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ