ಮಂಗಳೂರು: ನೇಣು ಬಿಗಿದು ನರ್ಸಿಂಗ್ ವಿದ್ಯಾರ್ಥಿಆತ್ಮಹತ್ಯೆ

ನರ್ಸಿಂಗ್ ವಿದ್ಯಾರ್ಥಿಯೊರ್ವ ಬೆಡ್‌ ಶೀಟ್ ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 8 ರಂದು ಹಾಸ್ಟೆಲ್ ಕೋಣೆಯಲ್ಲಿ ನಡೆದಿದೆ. ಕೇರಳದ ಅಲೆಪಿ ನಿವಾಸಿ ಸಚಿನ್ ಸಾಜು (19 ) ಆತ್ಮಹತ್ಯೆಗೆ ಶರಣಾದ ನರ್ಸಿಂಗ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.ಮೃತ ವಿದ್ಯಾರ್ಥಿ ನ. 30ರಂದು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ಕೋರ್ಸ್ ಗೆ ಪ್ರವೇಶಾತಿಯನ್ನು ಪಡೆದಿದ್ದರು. ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು, ತರಗತಿಗಳಿಗೆ ಹಾಜರಾಗದೇ ಹಾಸ್ಟೆಲ್ ನಲ್ಲಿ ಇರುತ್ತಿದ್ದರೆನ್ನಲಾಗಿದೆ.ಡಿ. 8 ರಂದು ತನ್ನ ಕೋಣೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ