ಸುಳ್ಯ: ಇಲಿಪಾಷಾಣ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯೋರ್ವ ಇಂದು(ಡಿ. ೧೫) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಶಮಂತ್ ಎಂದು ಗುರುತಿಸಲಾಗಿದೆ. ಎಲಿಮಲೆ ಸಮೀಪದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ, ಶಮಂತ್ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಕೂಡ ಶಮಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಹಲವಾರು ಮಂದಿ ಆತನ ಚಿಕಿತ್ಸೆಗಾಗಿ ನೆರವು ನೀಡಿದ್ದರು. ಇದೀಗ ಮತ್ತೆ ವಿದ್ಯಾರ್ಥಿ ಆತ್ಮಹತ್ಯೆಗೆ ‌ಶರಣಾಗಿದ್ದು, ಆತನ ಕುಟುಂಬಸ್ಥರು, ಸಹಪಾಠಿಗಳು, ಅಧ್ಯಾಪಕರು ಶಾಕ್ ಗೆ ಒಳಗಾಗಿದ್ದಾರೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ