ಅರ್ಚಕರ ಕಣ್ಣು ಕಿತ್ತು, ಜನನಾಂಗ ಕತ್ತರಿಸಿ ಭೀಕರ ಹತ್ಯೆ; ಬಿಹಾರ ಉದ್ವಿಗ್ನ

ಪಾಟ್ನಾ: ಅರ್ಚಕರೊಬ್ಬರನ್ನು ಕಣ್ಣುಗಳನ್ನು ಕಿತ್ತು, ಜನನಾಂಗ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ (Bihar) ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಪರಿಣಾಮವಾಗಿ ರಾಜ್ಯದಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. 32 ವಯಸ್ಸಿನ ಮನೋಜ್ ಕುಮಾರ್ ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಕಳೆದ ಬಾರಿ ಮಧ್ಯರಾತ್ರಿ ದಾನಾಪುರ ಗ್ರಾಮದ ಶಿವನ ದೇವಸ್ಥಾನದಿಂದ ಹೊರಟಿದ್ದರು. ಶನಿವಾರ ಸಂಜೆ ಅರ್ಚಕರ ಮೃತದೇಹವನ್ನು ಪೊದೆಗಳಿಂದ ಹೊರತೆಗೆಯಲಾಯಿತು. ಅವರ ಖಾಸಗಿ ಭಾಗಗಳಲ್ಲಿ ಗಾಯಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೋಜ್ ಕುಮಾರ್ ಸಹೋದರ ಅಶೋಕ್ ಬಿಜೆಪಿ ಮಾಜಿ ಕಾರ್ಯಕರ್ತ. ಆತನ ಶವ ಪತ್ತೆಯಾದ ಕೂಡಲೇ ಗ್ರಾಮದಲ್ಲಿ ಘರ್ಷಣೆ ನಡೆದಿದ್ದು, ಪೊಲೀಸರ ನಿರ್ಲಕ್ಷ್ಯ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಲಾಗಿದೆ.

ಮನೋಜ್ ಕುಮಾರ್ ಅವರ ಕುಟುಂಬ ಮಂಗಳವಾರ ನಾಪತ್ತೆ ದೂರು ನೀಡಿದ್ದು, ಪೊಲೀಸರು ಅವರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದರು. ಗೋಪಾಲಗಂಜ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಪ್ರಾಂಜಲ್ ಮಾತನಾಡಿ, ಗ್ರಾಮದಲ್ಲಿ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾಕಷ್ಟು ಪೊಲೀಸ್ ಪಡೆಯನ್ನು ಕರೆಸಲಾಗಿದೆ. ತನಿಖೆ ಆರಂಭಿಸಲಾಗಿದ್ದು, ಆರೋಪಿಗಳನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ