ಕತಾರ್: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಉಪ್ಪಳ‌ ನಿವಾಸಿ ಮಹಮ್ಮದ್ ಹನೀಫ್ ಮೃತ್ಯು!

ಕತಾರ್: ಕತ್ತಾರ್ ನಲ್ಲಿ ಉದ್ಯೋಗದಲ್ಲಿದ್ದ ಹನೀಫ್ ಎಂಬುವವರು ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ ಸಂಭವಿಸಿ ಮೃತಪಟ್ಟಿದ್ದಾರೆ. ಇವರು ಕಳೆದ ಡಿಸೆಂಬರ್ ನಲ್ಲಿ ಕತಾರ್ ಗೆ ತೆರಳಿದ್ದರು. ಹನೀಫ್ ಶನಿವಾರ ರಾತ್ರಿ ಕಂಪೆನಿಯಲ್ಲಿ ಕೆಲಸ ಮುಗಿಸಿ ತನ್ನ ರೂಮಿಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ದಾಟುವಾಗ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ

ಕಾಸರಗೋಡು ಜಿಲ್ಲೆಯ ಉಪ್ಪಳ ಪಟವಾಡಿ ನಿವಾಸಿಯಾದ ಮುಹಮ್ಮದ್ ಹನೀಫ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ