ಬೆಂಗಳೂರು: ವಂದೇಮಾತರಂ ಮತ್ತು ಕಾಶಿ ಯಾತ್ರೆ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ವಂದೇಮಾತರಂ ಮತ್ತು ಕಾಶಿ ಯಾತ್ರೆ ರೈಲಿಗೆ ಚಾಲನೆ ನೀಡಿದ್ದಾರೆ.

ಪ್ರಧಾನಿ ‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೆ ಶುಕ್ರವಾರ ಚಾಲನೆ ನೀಡಿದರು. ಈ ರೈಲು ಯಾತ್ರಿಗಳನ್ನು ಕಾಶಿ, ಅಯೋಧ್ಯೆ ಸೇರಿದಂತೆ ಹಲವು ಪ್ರಮುಖ ಯಾತ್ರಾ ಸ್ಥಳಗಳಿಗೆ ಕೊಂಡೊಯ್ಯಲಿದ್ದು, ಒಂದು ವಾರದಲ್ಲಿ ಮರಳಿ ಬರಲಿದೆ. ರೈಲಿಗೆ ₹ 20,000 ಶುಲ್ಕ ನಿಗದಿಪಡಿಸಲಾಗಿದ್ದು, ರಾಜ್ಯ ಸರ್ಕಾರವು ₹ 5 ಸಾವಿರ ಸಹಾಯನಧನ ಒದಗಿಸುತ್ತಿದೆ. ಹೀಗಾಗಿ ಯಾತ್ರಿಕರು ₹ 15,000 ಮೊತ್ತದಲ್ಲಿ ಕಾಶಿ ಯಾತ್ರೆ ಪೂರ್ಣಗೊಳಿಸಬಹುದಾಗಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕಾಶಿ ದರ್ಶನ ರೈಲು ಪ್ಯಾಕೇಜ್‌ ಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ ದೊರೆಯುತ್ತಿರುವುದು ಬಹಳ ಸಂತಸದ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಪುನರ್‌ ನಿರ್ಮಾಣಗೊಂಡಿರುವ ಭವ್ಯ ಕಾಶಿ – ದಿವ್ಯ ಕಾಶಿಯನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ಕಣ್ತುಂಬಿಕೊಳ್ಳಲಿ ಎನ್ನುವ ಪ್ರಮುಖ ಉದ್ದೇಶದಿಂದ ಈ ರೈಲು ಪ್ರವಾಸವನ್ನು ಆಯೋಜಿಸಲಾಗಿದೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ