ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊರ್ವನ ಬಂಧನ

ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.26 ರಂದು ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.

ಇದರೊಂದಿಗೆ ಬಂಧಿತರ ಒಟ್ಟು ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಶನಿವಾರ ಬೆಳಗ್ಗೆ ದಾಳಿ ನಡೆಸಿದ ಎನ್‌ಐಎ ತಂಡ ಈಗಾಗಲೇ ಎನ್‌ಐಎ ಬಂಧನದಲ್ಲಿರುವ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆಯ ಭಾವ, ಎಸ್.ಡಿ.ಪಿ.ಐ ಬೆಳ್ಳಾರೆ ಕಾರ್ಯದರ್ಶಿ ಮೊಹಮ್ಮದ್ ಶಹೀದ್ (34) ಎಂಬಾತನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ