ಸುಳ್ಯ: ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಇವರು, ಕರ್ನಾಟಕ ರಾಜ್ಯ ಸರಕಾರ ನೀಡಲ್ಪಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಮುಂಬರುವ ನ.18 ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನಿತ್ಯಾನಂದ ಮುಂಡೋಡಿ ಅವರಿಗೆ ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು,.



ಕಳೆದ ಹಲವು ದಶಕಗಳಿಂದ ಸುಳ್ಯ ತಾಲೂಕಿನ ಹಾಗೂ ದ.ಕ.ಜಿಲ್ಲೆಯ ಸಹಕಾರಿ ರಂಗದಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸುಳ್ಯದ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಬೆಳೆಗಾರರ ಸಹಕಾರ ಮಾರಾಟ ಸಂಘದ ಅಧ್ಯಕ್ಷರಾಗಿದ್ದಾರೆ. ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ, ಮಾಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿಯೂ ಸಕ್ರೀಯರಾಗಿರುವ ತೊಡಗಿಸಿಕೊಂಡಿರುವ ನಿತ್ಯಾನಂದ ಮುಂಡೋಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
