ಕಲ್ಲುಗುಂಡಿ: ಇಲ್ಲಿನ ಕಡಪಾಲ ಸೇತುವೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಲಾರಿ ಚಾಲಕ ಕೊನೆಯುಸಿರೆಳೆದಿದ್ದಾರೆ

ಮೈಸೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಗಾಯಾಳುಗಳನ್ನು ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಬಸ್ ಗೆ ಲಾರಿ ಡಿಕ್ಕಿಯಾದ ವೇಳೆ ಮಧ್ಯದಲ್ಲಿ ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರ ಪರಿಶ್ರಮದಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಚಾಲಕ ತನ್ನ ಊರಾದ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳುತ್ತಿದ್ದ ವೇಳೆ ಕುಶಾಲನಗರ ತಲುಪುವ ವೇಳೆ ಮೃತಪಟ್ಟರೆಂದು ತಿಳಿದುಬಂದಿದೆ.
