ತ್ರಿಪುರಾ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮುಂದಿನ ವರ್ಷ ಜನವರಿ 1ರಂದು ರಾಮ ಮಂದಿರ ಸಿದ್ಧವಾಗಲಿದೆ ಎಂಧು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ತ್ರಿಪುರಾದಲ್ಲಿ ಜನ ವಿಶ್ವಾಸ ಯಾತ್ರೆಯ ಭಾಷಣದಲ್ಲಿ ಅಮಿತ್ ಶಾ ಈ ಮಾಹಿತಿ ನೀಡಿದ್ದಾರೆ. ಆದಿತ್ಯನಾಥ್ ಯೋಗಿ ಮತ್ತು ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ರಾಮಂದಿರ ನಿರ್ಮಾಣ ಮಾಡುತ್ತಿದ್ದು, ಮುಂದಿನ ವರ್ಷ ಆರಂಭದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಹಿಂದಿನ ವರ್ಷದ ಸರಕಾರವು ರಾಮಮಂದಿರ ವಿಷಯದಲ್ಲಿ ಸುಳ್ಳು ಆರೋಪ ಮಾಡುತ್ತಿತ್ತು. ಆದರೆ, ಕೋರ್ಟ್ ತೀರ್ಪು ನೀಡಿದ ದಿನವೇ ಮೋದಿ ಸರಕಾರವು ರಾಮಮಂದಿರದ ಕೆಲಸವನ್ನು ಆರಂಭಿಸಿದೆ. ಮುಂದಿನ ವರ್ಷದ ಜನವರಿ ತಿಂಗಳಲ್ಲಿ ಶ್ರೀರಾಮ ಮಂದಿರ ಸಿದ್ಧವಾಗಲಿದೆ ಎಂದು ಅವರು ಹೇಳಿದ್ದಾರೆ.
The post ಜನವರಿ 1, 2024ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ, ಗೃಹ ಸಚಿವ ಅಮಿತ್ ಶಾ ಘೋಷಣೆ appeared first on ನಮ್ಮ ಸುಳ್ಯ.