ಉಡುಪಿ

ಸೌಂದರ್ಯ ಸ್ಪರ್ಧೆ: ಹಿತಾ ಸುವರ್ಣ ‘ಮಿಸ್ ತುಳುನಾಡು’

ಉಡುಪಿ: ಇಲ್ಲಿನ ಮಣಿಪಾಲ್ ಇನ್ ನಲ್ಲಿ ನಡೆದ ಮಿಸ್ ತುಳುನಾಡು ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಉಡುಪಿಯ ಪಿಪಿಸಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ  ಮಾಡುತ್ತಿರುವ ಹಿತಾ ಸುವರ್ಣ “2022 ಮಿಸ್ ತುಳುನಾಡು” ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾಳೆ.

ಸೌಂದರ್ಯ ಸ್ಪರ್ಧೆ: ಹಿತಾ ಸುವರ್ಣ ‘ಮಿಸ್ ತುಳುನಾಡು’ Read More »

ಕೆ. ಸುಬ್ರಹ್ಮಣ್ಯ ಆಚಾರ್ಯರಿಗೆ ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.

ಉಡುಪಿ: ಕರ್ನಾಟಕ ಸರಕಾರ, ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಿತಿ ಉಡುಪಿ ಜಿಲ್ಲೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಂಕೀರ್ಣ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಶ್ರೀ ಕೆ ಸುಬ್ರಮಣ್ಯ ಆಚಾರ್ಯ ಇವರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಅಂಗಾರ ಇವರು 2022 ರ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೆ. ಸುಬ್ರಹ್ಮಣ್ಯ ಆಚಾರ್ಯರಿಗೆ ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ. Read More »

ಉಡುಪಿಯಲ್ಲಿ ವಾಸವಿದ್ದ ಸುಳ್ಯ ಮೂಲದ ವ್ಯಕ್ತಿ ಆತ್ಮಹತ್ಯೆ

ಉಡುಪಿ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಶಿರ್ವದ ಇರ್ಮಿಜ್ ಚರ್ಚ್ ಬಳಿ ನಡೆದಿದೆ. ದಕ್ಷಿಣ ಕನ್ನಡದ ಸುಳ್ಯ ಸಂಪಾಜೆಯ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಲಿಯೋ ತಾನು ಇದ್ದ ಬಾಡಿಗೆ ಮನೆಯ ಬಳಿ ಮರವೊಂದಕ್ಕೆ ಕೇಬಲ್ ವಯರ್ ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಜಾನೆ ಈ ವಿಷಯ ಬೆಳಕಿಗೆ ಬಂದಿದ್ದು ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿಯಲ್ಲಿ ವಾಸವಿದ್ದ ಸುಳ್ಯ ಮೂಲದ ವ್ಯಕ್ತಿ ಆತ್ಮಹತ್ಯೆ Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ