ಬಾಲ್ ಬ್ಯಾಡ್ಮಿಂಟನ್: ಶಾರದಾ ಪಿ.ಯು. ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಚಾಂಪಿಯನ್ ಪಟ್ಟಗಳಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಈ ತಂಡದಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ತುಳಸಿ ಹಾಗೂ ದ್ವಿತೀಯ ಕಲಾ ವಿಭಾಗದ ಶ್ರೀಫಾ ಭಾಗವಹಿಸಿದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲ್ ಬ್ಯಾಡ್ಮಿಂಟನ್: ಶಾರದಾ ಪಿ.ಯು. ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ. Read More »