ಕೊಡಗು: ಮದೆನಾಡು ಬಳಿ ಮಣ್ಣು ಕುಸಿತ.!

ಮಡಿಕೇರಿ ಆ.11 :  ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ  ಬಿರುಕು ಬಿಟ್ಟಿದ್ದ ಗುಡ್ಡದ ಕೆಳಭಾಗದಲ್ಲಿ ಮಣ್ಣು ಕುಸಿತಗೊಂಡಿದ್ದು, ಹಿಟಾಚಿ ಮೂಲಕ ಮಣ್ಣು ತೆರವು ಕಾರ್ಯ ನಡೆಯಿತು. ಗುಡ್ಡದಲ್ಲಿ ಕಳೆದ 2 ದಿನಗಳ ಹಿಂದೆ ಬಿರುಕು ಕಾಣಿಸಿಕೊಂಡಿದ್ದು, ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿತ್ತು.