ತಲೆ ಬೋಳಿಸಿಕೊಂಡ ಖ್ಯಾತ ನಟ ಧನುಷ್;
ನಟ ಧನುಷ್ (Dhanush) ಅವರು ಕಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಪ್ರತಿ ಸಿನಿಮಾದಲ್ಲಿ ಅವರು ವಿಶೇಷವಾದ ಪಾತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ‘ಕ್ಯಾಪ್ಟನ್ ಮಿಲ್ಲರ್’ (Captain Miller) ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಈ ನಡುವೆ ಅವರ ಹೊಸ ಲುಕ್ ವೈರಲ್ ಆಗಿದೆ. ಧನುಷ್ ಅವರು ತಲೆ ಬೋಳಿಸಿಕೊಂಡಿದ್ದಾರೆ. ರುದ್ರಾಕ್ಷಿ ಮಾಲೆ ಧರಿಸಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ತಿರುಪತಿ ತಿಮ್ಮಪ್ಪನ (Tirupati Temple) ದರ್ಶನ ಪಡೆದಿರುವ ಅವರು ಮುಡಿ ಕೊಟ್ಟಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ. ಅದರ ಬೆನ್ನಲ್ಲೇ ಒಂದಷ್ಟು ಪ್ರಶ್ನೆಗಳು ಮೂಡಿವೆ. ಇದು ಧನುಷ್ ಅವರ ಮುಂಬರುವ ಸಿನಿಮಾಗೆ …