Sea

ಉಳ್ಳಾಲ: ಸೋಮೇಶ್ವರ ಸಮುದ್ರಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆ

ಉಳ್ಳಾಲ, ಡಿ 10: ಸೋಮೇಶ್ವರದ ಅಲಿಮಕಲ್ಲು ಬಳಿ ಸಮುದ್ರ ಪಾಲಾದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಅದೇ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ನಿನ್ನೆ ಮುಳುಗಡೆಯಾದ ಸಂಜೆಯಿಂದ ಬೆಳಗ್ಗಿನವರೆಗೂ ಸ್ಥಳೀಯ ಈಜುಗಾರರು ನಿರಂತರ ಕಾರ್ಯಾಚರಣೆಯಲ್ಲಿದ್ದರು. ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯಶ್ವಿತ್ (18) ಮತ್ತು ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ ಯುವರಾಜ್ (18) ಸಮುದ್ರ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಘಟನೆಯ ವಿವರ: ಸೋಮೇಶ್ವರ ಪರಿಜ್ಞಾನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಾದ […]

ಉಳ್ಳಾಲ: ಸೋಮೇಶ್ವರ ಸಮುದ್ರಪಾಲಾದ ವಿದ್ಯಾರ್ಥಿಗಳ ಮೃತದೇಹ ಪತ್ತೆ Read More »

ಉಳ್ಳಾಲ: ಸೋಮೇಶ್ವರದಲ್ಲಿ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲು

ಉಳ್ಳಾಲ,: ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿರುವ ಘಟನೆ ಇಂದು ಮಧ್ಯಾಹ್ನ ವೇಳೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ. ಇಬ್ಬರು ಸಮೀಪದ ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿ ತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ಬಳಿಕ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರು ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಉಳ್ಳಾಲ

ಉಳ್ಳಾಲ: ಸೋಮೇಶ್ವರದಲ್ಲಿ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲು Read More »

Scroll to Top
Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ